ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣ ನಡೆದು ಮೂರು ತಿಂಗಳು ಕಳೆಯುತ್ತಾ ಬಂದಿವೆ. ಇಂದಿಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಕೋರ್ಟ್ನಲ್ಲಿ ಇದರ ವಿಚಾರಣೆ ಇಂದು ನಡೆಯಲಿದೆ. ಕೆಲವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ದರ್ಶನ್ ಇನ್ನೂ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಹೀಗಾಗಿ, ಎಲ್ಲರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ.
ಇಂದು ಬೆಂಗಳೂರಿನ 24ನೇ ACMM ಕೋರ್ಟ್ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಆರೋಪಿಗಳ ವಿಚಾರಣೆ ನಡೆಯಲಿದೆ. ಆರೋಪಿಗಳ ಪರ ವಕೀಲರಿಗೆ ಚಾರ್ಜ್ಶೀಟ್ ಪ್ರತಿ ಸಲ್ಲಿಕೆ ಆಗಲಿದೆ. ದೋಷಾರೋಪ ಪಟ್ಟಿ ಸಿಕ್ಕರೆ ಅನೇಕ ವಿಚಾರಗಳು ರಿವೀಲ್ ಆಗಲಿವೆ. ದರ್ಶನ್ ವಿರುದ್ಧ ಇರುವ ಆರೋಪಗಳು ಈಗಾಗಲೇ ಸಂಚಲನ ಸೃಷ್ಟಿ ಮಾಡಿವೆ. ಅದರ ಜೊತೆ ಮತ್ತೊಂದಿಷ್ಟು ವಿಚಾರಗಳು ಹೊರ ಬರುತ್ತವೆಯೇ ಎನ್ನುವುದನ್ನು ಕಾದು ನೋಡಬೇಕಿದೆ.