ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

public wpadmin

ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆ ಆಗುವುದರಲ್ಲಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಇವರು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರಾದ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ಅವರು ಪ್ರಕರಣದ ಪ್ರಾಥಮಿಕ ಸಾಕ್ಷ್ಯಾಧಾರಗಳ ಸಲ್ಲಿಸಿದರು. ಪೆನ್ಡ್ರೈವ್, ಹಾರ್ಡ್ಡಿಸ್ಕ್ ಸೇರಿ ಹಲವು ಸಾಕ್ಷ್ಯಾಧಾರಗಳ ಸಲ್ಲಿಕೆ ಮಾಡಿದ್ದಾರೆ. ಇವುಗಳನ್ನು ಜಡ್ಜ್ ಪರಿಶೀಲನೆ ಮಾಡಲಿದ್ದಾರೆ.

Share This Article
Leave a comment