ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಕುಂದಿದ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಚನ್ನಪಟ್ಟಣದ (Channapatna) ಶ್ರೀರಾಂಪುರ ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ನಿಖಿಲ್ ಅಭಿಮಾನಿ (Nikhil fan). ಕಳೆದ 15 ವರ್ಷಗಳಿಂದ ಜೆಡಿಎಸ್ ಕಾರ್ಯಕರ್ತನಾಗಿರುವ ಮಂಜುನಾಥ್, ನಿಖಿಲ್ ಅಪ್ಪಟ ಅಭಿಮಾನಿಯಾಗಿದ್ದರು, ಹೀಗಾಗಿ ನಿಖಿಲ್ ಸೋಲಿನಿಂದ ಬೇಸರಗೊಂಡು, ವಿಷ ಸೇವಿಸಿದ್ದರು. ಬಳಿಕ ಅವರನ್ನ ಮಂಡ್ಯದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮಂಜುನಾಥ್ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಆರೋಗ್ಯ ವಿಚಾರಿಸಲಿದ್ದಾರೆ.