ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. ಆದ್ರೆ 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ.
ಇನ್ನು ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ.