ಅಪ್ರಾಪ್ತ ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ; ಆಕೆ ಈಗ ಗರ್ಭಿಣಿ

public wpadmin

ಅಣ್ಣನೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ಸೂರತ್ ನಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕನೊಬ್ಬ ತನ್ನ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಈಗ ಗರ್ಭಿಣಿ ಎನ್ನುವ ಮಾಹಿತಿ ಲಭ್ಯವಾಗಿದೆ. ಆತ 16 ವರ್ಷದವನಾಗಿದ್ದು, ತಂಗಿಗಿನ್ನು 13 ವರ್ಷ ವಯಸ್ಸು, ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ.

ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ. ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ. ಬಾಲಕಿ ನಿರಾಕರಿಸಿದಾಗ ಆತ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿ, ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಘಟನೆ ಬಳಿಕ ಬಾಲಕಿಯ ತಾಯಿ ಸೆ.30ರಂದು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಲೀಸರ ಪ್ರಕಾರ, ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಡುತ್ತಿದ್ದರು ಮತ್ತು ಅವರ ಇಬ್ಬರೂ ಮಕ್ಕಳು ಮನೆಯಲ್ಲಿ ಇರುತ್ತಿದ್ದರು.

Share This Article
Leave a comment