ಬೆಂಗಳೂರು/ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಲಿದ್ದಾರೆ.
ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ದೂರುದಾರರ ಬಳಿ ದಾಖಲೆಯನ್ನು ಪೊಲೀಸರು ಸಂಗ್ರಹಿಸಲಿದ್ದಾರೆ.
ಇನ್ನೊಂದು ಕಡೆ ನಿವೃತ್ತ ನ್ಯಾ. ದೇಸಾಯಿ ತನಿಖಾ ಸಮಿತಿ ಬಳಿಯಿರುವ ದಾಖಲೆ ಪಡೆಯಲು ಕಾನೂನು ಪ್ರಕ್ರಿಯೆ ಆರಂಭವಾಗಲಿದೆ. ಆ ದಾಖಲೆಗಳು ಸಿಕ್ಕ ಮೇಲೆ ಆರೋಪಿಗಳಿಗೆ ಹಂತ ಹಂತವಾಗಿ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ.