ಬೈರೂತ್: ಇಸ್ರೇಲ್ ದಿನದಿಂದ ದಿನಕ್ಕೆ ಯುದ್ಧದ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ಲೆಬನಾನ್ ಜನ ಸಂಕಷ್ಟಕ್ಕೀಡಾಗಿ ದೇಶ ತೊರೆದಿದ್ದಾರೆ. ಇಸ್ರೇಲ್ ಜೊತೆಗಿನ ಸಂಘರ್ಷದಿಂದಾಗಿ ಲೆಬನಾನ್‌ನ 12 ಲಕ್ಷ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದಾಗಿ ಸುಮಾರು 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ವಲಸೆ (Civilians Migrate) ಹೋಗಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಅಲ್ಲದೇ ಮೂರು ದಿನಗಳ ಹಿಂದೆಯಷ್ಟೇ ಕೇವಲ 1 ಗಂಟೆ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲದೇ ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ಕೆಲ ಗಂಟೆಗಳ ನಂತರ ನೆತನ್ಯಾಹು ವೀಡಿಯೋವೊಂದರಲ್ಲಿ ಮಾತನಾಡಿದ್ದಾರೆ. ಒಂದು ಕಾಲದಲ್ಲಿ ಪ್ರಾಕೃತಿಕ ಸೌಂದರ್ಯ, ಸಹಿಷ್ಣುತೆಗೆ ಹೆಸರುವಾಸಿಯಾಗಿದ್ದ ಮಧ್ಯಪ್ರಾಚ್ಯ ಈಗ ಹಿಜ್ಬುಲ್ಲಾ ಮದ್ದು ಗುಂಡುಗಳನ್ನು ಸಂಗ್ರಹಿಸಿದ್ದು, ಇರಾನಿನ ಮಿಲಿಟರಿ ನೆಲೆಯಾಗಿ ಮಾರ್ಪಟ್ಟಿದೆ. ಹಾಗಾಗಿ ಕೂಡಲೇ ನಿಮ್ಮ ದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.