ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್

public wpadmin

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಈ ಫೋಟೋ ನೋಡಿದವರ ಕರುಳು ಚುರಕ್ ಎಂದಿದೆ. ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.

ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಬಂದಿದೆ. ರೇಣುಕಾ ಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚರ್ನಿಂದಲೇ ಅವರು ಮೃತಪಟ್ಟಿದ್ದರು. ಈಗ ಅವರು ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ನೋಡಿ ಅನೇಕರಿಗೆ ದುಃಖ ಆಗಿದೆ.

ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಸಿಟ್ಟಾಗಿದ್ದರು. ಉಗುರಲ್ಲಿ ಹೋಗೋದಕ್ಕೆ ಕೊಡಲಿ ತೆಗೆದುಕೊಂಡರು ಎಂಬಂತೆ, ದರ್ಶನ್ ಅವರು ಈ ವಿಚಾರವನ್ನು ಕಾನೂನಾತ್ಮಕವಾಗಿಯೂ ಬಗೆಹರಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಇದರಿಂದ ಅವರಿಗೆ ಸಂಕಷ್ಟ ಆಗಿದೆ.

Share This Article
Leave a comment