ಬೆಂಗಳೂರು: ಕನ್ನಡತಿ ಸೀರಿಯಲ್ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟ ಕಿರಣ್ ರಾಜ್ ಕಾರು ಅಪಘಾತಕ್ಕಿಡಾಗಿದೆ. ನಟ ಕಿರಣ್ ರಾಜ್ ಅವರು ಇದ್ದ ಕಾರು ಕೆಂಗೇರಿ ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಹೌದು, ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರು ಅಪಘಾತಕ್ಕಿಡಾಗಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕಿಡಾದ ಕಾರು ಫುಲ್ ಜಖಂಗೊಂಡಿದೆ. ನಟ ಕಿರಣ್ ರಾಜ್ ಜೊತೆಯಲ್ಲಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೆಲ್ಟ್ ಇಂದ ಸೇಫ್ ಆಗಿದ್ದಾರೆ.