ಡಾಲಿ ಚಿತ್ರಕ್ಕೆ ಕಾಂತಾರ ಬೆಡಗಿ ನಾಯಕಿ: ‘ಹಲಗಲಿ’ ಟೀಮ್ ಸೇರಿಕೊಂಡ ಸಪ್ತಮಿ

public wpadmin

ನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ ಅನ್ನೋದು ಎಲ್ಲರಿಗೂ ಗೊತ್ತು. ಈಗ ಆ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಆಯ್ಕೆಯಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಾಣದ ಬಹು ತಾರಾಗಣದ ಅದ್ಧೂರಿ ಬಜೆಟ್ ಚಿತ್ರ ‘ಹಲಗಲಿ’ ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ.

ಎರಡು ಭಾಗಗಳಲ್ಲಿ, ಮೂಡಿ ಬರಲಿರುವ  ಈ ಸಿನಿಮಾ  ಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆ ಎಂಬುದು ವಿಶೇಷ. ಐದು ಭಾಷೆಯಲ್ಲಿ ಅದ್ದೂರಿಯಾಗಿ ಸೆಟ್ಟೇರಿರುವ ಕನ್ನಡದ ಐತಿಹಾಸಿಕ ಸಿನಿಮಾದಲ್ಲಿ ಕನ್ನಡ ಸೇರಿದಂತೆ ಬಹುಭಾಷಾ ನಟರೂ ಇರಲಿದ್ದಾರೆ. ಕನ್ನಡ ಸೇರಿ ಐದು ಭಾಷೆಯಲ್ಲಿ ಮೂಡಿ ಬರುತ್ತಿರುವ ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆ ಇದಾಗಿದ್ದು, ಸಿನಿಮಾಗೆ ಬೇಕಾದ ಎಲ್ಲಾ ತಯಾರಿ ಮಾಡಿಕೊಂಡು ಚಿತ್ರೀಕರಣಕ್ಕೆ ಹೊರಡುವ ಉತ್ಸಾಹದಲ್ಲಿದೆ ಚಿತ್ರತಂಡ.

ನಟ ಡಾಲಿ ಧನಂಜಯ ಅವರ ವೃತ್ತಿ ಪಯಣದಲ್ಲಿ ಮತ್ತೊಂದು ಮೈಲುಗಲ್ಲಿನ ಚಿತ್ರವಿದು.  ಇಲ್ಲಿವರೆಗೂ ಅವರನ್ನು ತೆರೆ ಮೇಲೆ ವಿಭಿನ್ನ ಪಾತ್ರಗಳಲ್ಲಿ  ನೋಡಿ ಮೆಚ್ಚಿದ್ದ ಪ್ರೇಕ್ಷಕರು, ಈಗ ವಾರಿಯರ್ ಪಾತ್ರದಲ್ಲಿ ನೋಡಲಿದ್ದಾರೆ. ಇವರ ಕೈಗೆ ಬಿಲ್ಲು, ಬಾಣ, ಮದ್ದು- ಗುಂಡುಗಳನ್ನು ಕೊಟ್ಟು ಯುದ್ಧದ ಅಖಾಡಕ್ಕೆ ಇಳಿಸಿರುವುದು ಕನ್ನಡ ನಾಡಿನ ಇತಿಹಾಸ ಪುಟಗಳಲ್ಲಿ ಅಚ್ಚಳಿಯದೆ ದಾಖಲಾಗಿರುವ ಒಂದು ರೋಚಕ ಇತಿಹಾಸ.

Share This Article
Leave a comment