ಹೈದರಾಬಾದ್: ನಟ ನಾಗ ಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ಅವರ ವಿಚ್ಛೇದನಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಸಚಿವೆ ಕೊಂಡ ಸುರೇಖಾ ವಿರುದ್ಧ ನಟ ನಾಗಾರ್ಜುನ್ ದೂರು ದಾಖಲಿಸಿದ್ದಾರೆ.
ಇದೀಗ ನಟ ಅಕ್ಕಿನೇನಿ ನಾಗಾರ್ಜುನ, ಸಚಿವೆ ಕೊಂಡ ಸುರೇಖಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ನಾಮಪಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕೊಂಡ ಸುರೇಖಾ ವಿರುದ್ಧ ದೂರು ದಾಖಲಿಸಿರುವ ನಾಗಾರ್ಜುನ, ಸಚಿವೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ನ್ಯಾಯಾಲಯವನ್ನು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆ ಶೀಘ್ರವೇ ನಡೆಯಲಿದೆ. ದೂರು ದಾಖಲಿಸಿರುವ ಪ್ರತಿಯನ್ನು ನಾಗಾರ್ಜುನ ಎರಡನೇ ಪುತ್ರ ಅಕ್ಕಿನೇನಿ ಅಖಿಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಹೌದು, ನಟ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ಮುರಿದುಬೀಳಲು ಬಿಆರ್‌ಎಸ್ ಮುಖಂಡ ಕೆಟಿ ರಾಮರಾವ್ ಅವರೇ ಕಾರಣ ಎಂದು ಸಚಿವೆ ಕೊಂಡಾ ಸುರೇಖಾ ಸ್ಫೋಟಕ ಆರೋಪ ಮಾಡಿದ್ದರು. ತೀವ್ರ ವಿರೋಧದ ನಂತರ ಸಚಿವೆಯ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದರು.