ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಕ್ರವರ್ತಿ

public wpadmin

70ನೇ ರಾಷ್ಟ್ರ ಪ್ರಶಸ್ತಿ ಸಮಾರಂಭ ಇಂದು ದೆಹಲಿಯಲ್ಲಿ ನಡೆದಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಟಿಸುತ್ತಿರುವ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇನ್ನೂ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ `ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದೆ. ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

Share This Article
Leave a comment