ದಿನ ಭವಿಷ್ಯ… 16-10-2024, ಬುಧವಾರ, ‌ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

public wpadmin

ಶುಭ ದಿನ

ಇಂದಿನ ರಾಶಿ‌ ಭವಿಷ್ಯ

16-10-2024, ಬುಧವಾರ

ಮೇಷ

ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳ ಭೇಟಿ ಮಾಡುವಿರಿ, ಕ್ಷೇತ್ರ ದರ್ಶನ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ವೃಷಭ

ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಮಿಥುನ

ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಇದೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಕರ್ಕಾಟಕ

ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಸಿಂಹ

ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಕನ್ಯಾ

ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ತುಲಾ

ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವಾಗುವುದು ಬೇಡ. ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ. ಇದರಿಂದ ಮನಸ್ಸು ಘಾಸಿಯಾಗುವುದು. ಅಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ. ಅದೃಷ್ಟ ಸಂಖ್ಯೆ: 7

ವೃಶ್ಚಿಕ

ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಧನುಸ್ಸು

ದೀರ್ಘಕಾಲದ ಪ್ರಯಾಣ ಬೆಳೆಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಮಕರ

ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಅದೃಷ್ಟ ಸಂಖ್ಯೆ: 6

ಕುಂಭ

ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಮೀನ

ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ.ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಆಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Share This Article
Leave a comment