ದಿನ ಭವಿಷ್ಯ… 21-09-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

public wpadmin

ದಿನ ಭವಿಷ್ಯ- ಇಂದಿನ ರಾಶಿ ಭವಿಷ್ಯ

21-09-2024, ಶನಿವಾರ


ಮೇಷ

ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸ ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸಿನ ಬಲವಾದ ಸಾಧ್ಯತೆಯಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ

ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಲಾಭ ದಿನವಾಗಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ . ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ಮಿಥುನ

ನೀವು ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶವನ್ನು ಪಡೆಯಬಹುದು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ, ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯ ಸಮಸ್ಯೆವಿದ್ದರೆ ಸುಧಾರಣೆ ಕಂಡು ಬರುವುದು.

ಕರ್ಕಾಟಕ

ನೀವು ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಕೆಲಸದಲ್ಲಿ ಯಾವುದೇ ಬದಲಾವಣೆ ಮಾಡಬೇಡಿ. ಆಸ್ತಿ ಸಂಬಂಧಿತ ವಿಷಯಕ್ಕೆ ಮನೆಯಲ್ಲಿ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ಉತ್ತಮವಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲು ನೀವು ನಿಮ್ಮ ಮಾತಿನ ಮೇಲೆ ನಿಯಂತ್ರಣವಿಡಬೇಕಾಗುತ್ತದೆ.

ಸಿಂಹ

ಕೆಲವೊಂದು ಆರೋಗ್ಯ ಸಮಸ್ಯೆಗಳಿರಬಹುದು. ಹಣದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಸಾಲ ನೀಡುವುದನ್ನು ತಪ್ಪಿಸಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ಕೆಲಸದ ಕಡೆಗೆ ಗಮನಹರಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

ಕನ್ಯಾ

ವ್ಯಾಪಾರಸ್ಥರಿಗೆ ಲಾಭದ ಸಾಧ್ಯತೆಗಳಿವೆ. ಶಿಕ್ಷಣಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.

ತುಲಾ

ಈ ಅವಧಿಯಲ್ಲಿ ಯಾರನ್ನೂ ನಂಬಬೇಡಿ, ಹೆಚ್ಚು ಸಾಲ ಮಾಡಬೇಡಿ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಕೆಲಸದಲ್ಲಿ ಹೆಚ್ಚು ಪರಿಶ್ರಮ ಹಾಕಬೇಕು, ದಂಪತಿಗಳಿಗೆ ದಿನವು ವಿವಾದಾತ್ಮಕವಾಗಿರುತ್ತದೆ. ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಶ್ಚಿಕ

ಈ ದಿನ ಶುಭವಾಗಿದೆ, ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ನೀವು ಉತ್ತಮ ಫಲಿತಾಂಶ ಪಡೆಯಬಹುದು. ಆರ್ಥಿಕವಾಗಿ ಉತ್ತಮವಾಗಿದೆ. ಮನೆಯಲ್ಲಿ ವಾತಾವರಣ ಸುಧಾರಿಸುತ್ತದೆ. ನೀವು ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಬೇಕು. ಈ ದಿನ ಆರೋಗ್ಯ ಉತ್ತಮವಾಗಿರುತ್ತದೆ.

ಧನುಸ್ಸು

ಕೆಲಸದಲ್ಲಿ ಕೆಲ ಅಡೆತಡೆಗಳಿರಬಹುದು, . ಕುಟುಂಬದ ಯಾವುದೇ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಹಣದ ವಿಷಯಗಳಲ್ಲಿ ಈ ದಿನ ಉತ್ತಮವಾಗಿದೆ, ಈ ದಿನ ಹಣದ ಸಮಸ್ಯೆವಿರಬಹುದು, ಸಂಬಂಧಗಳಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಆರೋಗ್ಯ ಉತ್ತಮವಾಗಿರಲಿದೆ.

ಮಕರ

ಯಾವುದೇ ವೈಯಕ್ತಿಕ ಸಮಸ್ಯೆ ಇದ್ದರೆ ಅದು ಬಗೆಹರಿಯಲಿದೆ, ಹಣದ ವ್ಯವಹಾರವನ್ನು ಜಾಗ್ರತೆಯಿಂದ ಮಾಡಬೇಕು. ಆದರೆ ಹಣದ ಕಾರಣಕ್ಕೆ ಸ್ಥಗಿತಗೊಂಡಿದ್ದ ಕೆಲಸ ಪ್ರಾರಂಭಿಸಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ಉತ್ತಮವಾಗಿರಲಿದೆ.

ಕುಂಭ

ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ. ನೀವು ಕೆಲಸದ ಕಡೆಗೆ ಗಮನಹರಿಸಿ. ಆತ್ಮವಿಶ್ವಾಸದಿಂದ ಮಾಡುವ ಕೆಲಸದಲ್ಲಿ ಯಶಸ್ಸು ಕಾಣುವಿರಿ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ.ವೃತ್ತಿ ಸಂಬಂಧಿತ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.

ಮೀನ

ನಿಮ್ಮ ಕೆಲಸದ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಪಡೆದ ನಂತರ ನಿಮ್ಮ ಮನಸ್ಸು ತುಂಬಾ ಸಂತೋಷವಾಗುತ್ತದೆ. ವಾಹನವನ್ನು ಜಾಗ್ರತೆಯಿಂದ ಬಳಸಿ, ಪ್ರಮುಖ ಡಾಕ್ಯೂಮೆಂಟ್ ಜೋಪಾನವಾಗಿ ಇಡಿ. ಮನೆಯ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ, ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ.

Share This Article
Leave a comment