ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
HPZ ಟೋಕನ್ ಮೊಬೈಲ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ತಮನ್ನಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಅದರಂತೆ ಗುರುವಾರ (ಅ.17) ಗುವಾಹಟಿಯ ಇಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು.
ಈ ಅಪ್ಲಿಕೇಶನ್ ಪ್ರಚಾರ ಮಾಡಿದ್ದಕ್ಕಾಗಿ ವಿಚಾರಣೆ ನಡೆಸಲಾಗಿದೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ.