ನೆಚ್ಚಿನ ನಟ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿ ಎಂದು ಪ್ರಾರ್ಥಿಸಿದ ಅಭಿಮಾನಿಗಳು ಮತ್ತು ಆತ್ಮೀಯರಿಗೆ ಸೂಪರ್‌ಸ್ಟಾರ್ ರಜನಿಕಾಂತ್ ಕೃತಜ್ಞತೆ ಸಲ್ಲಿಸಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ನಾನು ಬೇಗ ಗುಣಮುಖರಾಗಲಿ ಎಂದು ಹಾರೈಸಿದ ನನ್ನ ಎಲ್ಲಾ ರಾಜಕೀಯ ಮಿತ್ರರಿಗೆ, ನನ್ನ ಎಲ್ಲಾ ಚಿತ್ರರಂಗದ ಗೆಳೆಯರಿಗೆ, ನನ್ನ ಎಲ್ಲಾ ಹಿತೈಷಿಗಳಿಗೆ, ಪತ್ರಿಕಾ ಮತ್ತು ಮಾಧ್ಯಮದವರಿಗೆ, ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನ್ನನ್ನು ಪ್ರೀತಿಸುವ, ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆ ಎಂದು ತಿಳಿಸಿದ್ದಾರೆ.
ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ, ಪ್ರೀತಿಯ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಹೃತ್ಪೂರ್ವಕ ಧನ್ಯವಾದಗಳು. ಅಮಿತಾಬ್ ಬಚ್ಚನ್ ಅವರ ಪ್ರೀತಿ, ಕಾಳಜಿಗೆ ನನ್ನ ಹೃದಯ ಸ್ಪರ್ಶಿಸಿದೆ ಎಂದು ತಲೈವಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.