ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಹುತೇಕ ಖಚಿತ

public wpadmin

ಬೆಂಗಳೂರು: ನಮ್ಮ ಮೆಟ್ರೋ 2011ರಲ್ಲಿ ಕಾರ್ಯಾಚರಣೆ ಆರಂಭಿಸಿದ ನಂತರ ಎರಡನೇ ಬಾರಿಗೆ ಪ್ರಯಾಣ ದರವನ್ನು ಪರಿಷ್ಕರಿಸುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ BMRCL ಬುಧವಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದು, ‘ಮೆಟ್ರೊ ರೈಲು ದರ ನಿಗದಿ ಸಮಿತಿ’ಗೆ ಅಕ್ಟೋಬರ್ 21 ರೊಳಗೆ ಸಲಹೆಗಳನ್ನು ನೀಡುವಂತೆ ನಾಗರಿಕರನ್ನು ಕೋರಿದೆ.
ನಾಗರಿಕರು ತಮ್ಮ ಸಲಹೆಗಳನ್ನು ffc@bmrc.co.in ಗೆ ಇಮೇಲ್ ಮಾಡಬಹುದು ಅಥವಾ 3ನೇ ಮಹಡಿ, ‘ಸಿ’ ಬ್ಲಾಕ್, ಬಿಎಂಟಿಸಿ ಕಾಂಪ್ಲೆಕ್ಸ್, ಕೆಹೆಚ್ ರಸ್ತೆ, ಶಾಂತಿನಗರ, ಬೆಂಗಳೂರು-560027 ಈ ವಿಳಾಸಕ್ಕೆ ಪತ್ರ ಬರೆದು ‘ಮೆಟ್ರೊ ರೈಲು ದರ ನಿಗದಿ ಸಮಿತಿ’ ಅಧ್ಯಕ್ಷರಿಗೆ ಅಭಿಪ್ರಾಯ ತಿಳಿಸಬಹುದು ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಇದು ಮೆಟ್ರೋ ರೈಲ್ವೇ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ, 2002 ರ ಸೆಕ್ಷನ್ 33 ಮತ್ತು 34 ರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ರಚಿಸಲಾದ ಬಿಎಂಆರ್ಸಿಎಲ್ನ ಮೊದಲ ದರ ನಿಗದಿ ಸಮಿತಿಯಾಗಿದೆ.

Share This Article
Leave a comment