ನಿಫಾ ಆತಂಕ: 41 ಜನರಿಗೆ ಹೋಂ‌ ಐಸೊಲೇಷನ್

public wpadmin

ಬೆಂಗಳೂರು: ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಮತ್ತೆ ಹೋಮ್ ಕ್ವಾರಂಟೈನ್ ಶುರುವಾಗಲಿದೆ.


ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

ಇನ್ನು 41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು, ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತವನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

Share This Article
Leave a comment