ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿಗಳು ಅರೆಸ್ಟ್

public wpadmin

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಇಂದು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share This Article
Leave a comment