ಪುರಿ ಜಗನ್ನಾಥ ದೇಗುಲದ ಪ್ರಸಾದಕ್ಕೂ ಪರೀಕ್ಷೆ..!

public wpadmin

ಭುವನೇಶ್ವರ: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಒಡಿಶಾದ ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ಪ್ರಸಾದಕ್ಕೆ ಬಳಸಲಾಗುವ ತುಪ್ಪದ ಪರೀಕ್ಷೆ ನಡೆಸಲಾಗುತ್ತಿದೆ.
ಹೌದು.. ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ನೈವೇದ್ಯ ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಪುರಿಯ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಅವರು, ಜಗನ್ನಾಥ ದೇಗುಲದಲ್ಲಿ ಕಲಬೆರಕೆಯಂತಹ ಯಾವುದೇ ಆರೋಪಗಳಿಲ್ಲ. ಅದಾಗ್ಯೂ ದೇವತೆಗಳಿಗೆ ಪ್ರಸಾದ ಮತ್ತು ‘ಬಾರಾಡಿ ಭೋಗ’ (ಆದೇಶದ ಮೇರೆಗೆ ಪ್ರಸಾದ) ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು, ಆಂಧ್ರಪ್ರದೇಶದ ತಿರುಮಲ ದೇವಸ್ಥಾನದಲ್ಲಿ ನೀಡುವ ಲಡ್ಡುಗಳನ್ನು ತಯಾರಿಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

Share This Article
Leave a comment