ಬಿಲ್ಲ ರಂಗ ಬಾಷಾ ಫೋಸ್ಟರ್ ರಿವೀಲ್!; ಇದು 2209ರಲ್ಲಿ ನಡೆಯೋ ಕಥೆ

public wpadmin

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಬಾಷಾ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ.

ನಿರೀಕ್ಷೆಗೆ ತಕ್ಕಂತೆ ಮೂಡಿಬಂದಿರುವ ಫಸ್ಟ್ ಝಲಕ್ ನಲ್ಲಿ ನಾನಾ ವಿಷಯಗಳನ್ನು ಅನೂಪ್ ಭಂಡಾರಿ ಕಟ್ಟಿಕೊಟ್ಟಿದ್ದಾರೆ. ಲಿಬರ್ಟಿ ಪ್ರತಿಮೆ, ಐಫೆಲ್ ಟವರ್ ಮತ್ತು ತಾಜ್ ಮಹಲ್ ನ್ನು ಬಿಲ್ಲ ರಂಗ ಭಾಷಾ ಗ್ಲಿಂಪ್ಸ್ ನಲ್ಲಿ ತೋರಿಸಿರುವ ಅವರು ಭವಿಷ್ಯದ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. Once Upon A Time in 2209 AD ಎಂದು ಶುರುವಾಗುವ ಝಲಕ್ ಬಹಳ ಕುತೂಹಲ ಹೆಚ್ಚಿಸಿದೆ.

ಸುದೀಪ್ ಅವರೇ ಹೇಳಿಕೊಂಡಿರುವಂತೆ ಅವರ ಸಿನಿಕರಿಯರ್ ನ ಬಹುದೊಡ್ಡ ಬಜೆಟ್ ಚಿತ್ರ ಇದಾಗಿದೆ. ಟಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಹನುಮಾನ್ ನಿರ್ಮಾಪಕರಾದ ನಿರಂಜನ್ ರೆಡ್ಡಿ ಹಾಗೂ‌ ಚೈತನ್ಯ ರೆಡ್ಡಿ ಬಿಲ್ಲ ರಂಗ ಬಾಷಾ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ತಮ್ಮದೇ ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಈ ಚಿತ್ರವನ್ನು ಅವರು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅಭಿಮಾನಿಗಳು “ಅಪ್‌ಡೇಟ್‌ ಬೇಕು ಬಾಸ್‌” ಎಂದು ಹೇಳುತ್ತಿದ್ದಾರೆ. “ಬಾಸ್‌ ಅಪ್‌ಡೇಟ್‌ ಬಾಸ್‌” “ಅಪ್‌ಡೇಟ್‌ ಬೇಕು ಬಾಸ್‌” ಎಂದೆಲ್ಲ ಧ್ವನಿ ಕೇಳುತ್ತಾರೆ. ತಕ್ಷಣ ವಿಡಿಯೋದಲ್ಲಿ ಅನೂಪ್‌ ಭಂಡಾರಿ ಅವರು ಪುಸ್ತಕ ಓದುವಂತೆ ಆ ಪುಸ್ತಕದಲ್ಲಿ ಬಿಲ್ಲ ರಂಗ ಬಾಷಾದ ಟೀಮ್‌ ಕುರಿತು ವಿವರವೂ ದೊರಕುತ್ತದೆ. “ಹನುಮಾನ್‌ ನಿರ್ಮಾಪಕರಿಂದ, ರಂಗಿತರಂಗ, ರಾಜರಥ ವಿಕ್ರಾಂತ್‌ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ” ಎಂಬ ಅಪ್‌ಡೇಟ್‌ ಅನ್ನು ಹಂಚಿಕೊಳ್ಳಲಾಗಿದೆ.

Share This Article
Leave a comment