ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

public wpadmin

ಬಳ್ಳಾರಿ: ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ಸೇವಿಸಿದ ಬಳಿಕ ವಿದಾರ್ಥಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಸಿಬ್ಬಂದಿ ನಿರ್ಲಕ್ಷದಿಂದಲೇ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ತಹಶೀಲ್ದಾರ್ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ನಿರ್ಲಕ್ಷ್ಯ ತೋರಿದ ಅಡುಗೆ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದಾರೆ.

Share This Article
Leave a comment