ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆ.ಪಿ.ನಗರದ ಬಿಲ್ಡರ್ ಎನ್. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳು ಬಿಲ್ಡರ್ನ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹಗರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನ 7-8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಇಡಿ ಅಧಿಕಾರಿಗಳು ಅಕ್ಟೋಬರ್ 18 ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಇಡಿ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.
ಇಡಿ ಅಧಿಕಾರಿಗಳು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಆರ್ಟಿಐ ಕಾರ್ಯಕರ್ತ ಗಂಗರಾಜು ಇಂದು (ಅ.28) ಬೆಂಗಳೂರು ಇಡಿ ಕಚೇರಿಗೆ ತೆರಳಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ.