ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಬೆಂಗಳೂರು ನಗರದಲ್ಲಿ ಇಂದು (ಸೋಮವಾರ) ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುಂದಿನ ಮೂರ್ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಸಂಭವವಿದೆ.
ಬೆಂಗಳೂರಿನಲ್ಲಿ ಮುಂದಿನ 3 ಗಂಟೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ – 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Leave a comment
Leave a comment