ಬೆಂಗಳೂರು: ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಇಂದಿರಾನಗರದ 80 ಅಡಿ ರಸ್ತೆ ಮತ್ತು ಇಂದಿರಾನಗರ 100 ಅಡಿ ರಸ್ತೆ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ಬುಧವಾರ (ಸೆ.11) ನಡೆಯಲಿದೆ. ಹೀಗಾಗಿ ವಾಹನಗಳ ಸುಗಮ ಸಂಚಾರಕ್ಕಾಗಿ ಸಂಜೆ 5:00 ಗಂಟೆಯಿಂದ ಮರುದಿನ ಬೆಳಗ್ಗೆ 6:00 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಸಂಚಾರ ನಿರ್ಬಂಧ:
ಹಳೆ ಮದ್ರಾಸ್ ರಸ್ತೆ ಆಂಜನೇಯ ಜಂಕ್ಷನ್ನಿಂದ ಕೆನ್ಸಿಂಗ್ಟನ್ ಜಂಕ್ಷನ್ ಗುರುದ್ವಾರ ಜಂಕ್ಷನ್ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.
ಗಂಗಾಧರಜೆಟ್ಟಿ ರಸ್ತೆ ನಾಗಮ್ಮ ದೇವಸ್ಥಾನದ ಜಂಕ್ಷನ್‌ನಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ವರೆಗೆ ವಾಹನ ಸಂಚಾರ ಬಂದ್ ಮಾಡಲಾಗಿದೆ
ಬೆಂಗಳೂರಿನ ಈ ರಸ್ತೆಯಲ್ಲಿ ಇಂದು ವಾಹನ ಸಂಚಾರ ಬಂದ್
Leave a comment
Leave a comment