ಬೆಂಗಳೂರು: ಚಲಿಸುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ನಡೆದಿದೆ.
ಚಲಿಸುತ್ತಿದ್ದ ಕ್ರೇಟಾ ಕಾರಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರಸ್ತೆ ಮಧ್ಯದಲ್ಲೇ ಕಾರು ನಿಲ್ಲಿಸಿ ಚಾಲಕ ಹಾಗೂ ಇತರ ಪ್ರಯಾಣಿಕರು ಕೆಳಗಡೆ ಇಳಿದಿದ್ದಾರೆ. ಹೊಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.