ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು: ಸ್ಪೀಕರ್

public wpadmin

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸ್ಪೀಕರ್​​ ಯು.ಟಿ.ಖಾದರ್ ಹೇಳಿದ್ದಾರೆ. ನಗರದ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಇನ್ನಷ್ಟು ಚೆನ್ನಾಗಿ ಅಧಿವೇಶನ ಮಾಡಲು ಸಿದ್ಧತೆ ನಡೆದಿದೆ. ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಜನಪ್ರತಿನಿಧಿಗಳಿಗೆ ಮಾತ್ರ ವಿಧಾನಸೌಧ ಅಲ್ಲಾ. ಈ ಭಾಗದ ಜನರಿಗೂ ನಮ್ಮ ವಿಧಾನಸೌಧ ಅನ್ನೋ ಭಾವನೆ ಮೂಡಬೇಕು. ಹೀಗಾಗಿ ಸುವರ್ಣ ವಿಧಾನಸೌಧಕ್ಕೆ ಎಲ್ಲರೂ ಬರಬೇಕು. ಸುಲಭದಲ್ಲಿ ಪಾಸ್ ಸಿಗುವ ವ್ಯವಸ್ಥೆ ಮಾಡುತ್ತೇವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನೂ ಕರೆದುಕೊಂಡು ಬರವ ವ್ಯವಸ್ಥೆ ಕೂಡ ಇದೆ ಎಂದು ಹೇಳಿದ್ದಾರೆ.

Share This Article
Leave a comment