ಎಲ್ಲಾ ಚರ್ಮದ ಆರೈಕೆ ಉತ್ಪನ್ನಗಳಲ್ಲಿ ಹಾಲು ಪ್ರಮುಖ ಅಂಶವಾಗಿದೆ. ಇದು ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಅಲ್ಲದೇ, ಹಾಲು ಚರ್ಮದ ಮೇಲಿನ ಸೂಕ್ಷ್ಮ ರೇಖೆಗಳು ಮತ್ತು ಸುಕ್ಕುಗಳ ನೋಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹೌದು, ಹಾಲು ತ್ವಚೆಯನ್ನು ಕಾಂತಿಯುತಗೊಳಿಸಲು ಸಹ ಸಹಾಯ ಮಾಡುತ್ತದೆ. ಹಾಲಿನಲ್ಲಿರುವ ಉರಿಯೂತ ನಿವಾರಕ ಗುಣಗಳು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಆದ್ದರಿಂದ ನಿಮ್ಮ ತ್ವಚೆಯ ಆರೈಕೆಗೆ ಹಸಿ ಹಾಲನ್ನು ಬಳಸುವುದರಿಂದ ಕಾಂತಿಯುತ ತ್ವಚೆಯನ್ನು ಪಡೆಯಲು ಸಹಾಯಕವಾಗಿದೆ.
ಹಾಲನ್ನು ನೈಸರ್ಗಿಕ ಕ್ಲೆನ್ಸರ್ ಆಗಿ ಸಹ ಬಳಸಬಹುದು. ಇದಕ್ಕಾಗಿ, ಹತ್ತಿ ಉಂಡೆಯನ್ನು ಹಸಿ ಹಾಲಿನಲ್ಲಿ ನೆನೆಸಿ, ಅದನ್ನು ನಿಮ್ಮ ಮುಖದ ಮೇಲೆ ನಿಧಾನವಾಗಿ ಒರೆಸಿ, ಒಣಗಲು ಬಿಡಿ. ನಂತರ ಅದನ್ನು ತಣ್ಣೀರಿನಿಂದ ತೊಳೆದರೆ ನಿಮ್ಮ ಸ್ಕೀನ್ ಹೊಳೆಯುತ್ತದೆ.
ಓಟ್ ಮೀಲ್ ಅಥವಾ ಅಕ್ಕಿ ಹಿಟ್ಟಿನೊಂದಿಗೆ ಹಸಿ ಹಾಲನ್ನು ಬೆರೆಸಿ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಅನ್ನು ನಿಮ್ಮ ಮುಖದ ಮೇಲೆ ಹಚ್ಚಿ ಸ್ಕ್ರಬ್ ಮಾಡುವುದರಿಂದ ತ್ವಚೆಯಲ್ಲಿರುವ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಿ ಚರ್ಮವು ಕಾಂತಿಯುತವಾಗುತ್ತದೆ.
ಹಾಲಿನ ಫೇಸ್ ಪ್ಯಾಕ್ ಚರ್ಮವು ನೈಸರ್ಗಿಕ ಹೊಳಪನ್ನು ಪಡೆಯಲು ಸಹಾಯ ಮಾಡುತ್ತದೆ. ಒಂದು ಬಟ್ಟಲಿನಲ್ಲಿ ಅರಿಶಿನ ಮತ್ತು ಜೇನುತುಪ್ಪ ಸೇರಿಸಿ ಅದಕ್ಕೆ ಬೇಕಾದಷ್ಟು ಹಾಲು ಸೇರಿಸಿ ಫೇಸ್ ಪ್ಯಾಕ್ ಮಾಡಿಕೊಳ್ಳಿ. ಕಾಂತಿಯುತ ತ್ವಚೆಯನ್ನು ಪಡೆಯಲು ಈ ಫೇಸ್ ಪ್ಯಾಕ್ ಅನ್ನು ವಾರಕ್ಕೆ ಎರಡು ಬಾರಿ ಹಚ್ಚಿ.