ನವದೆಹಲಿ: ಅಕ್ರಮವಾಗಿ ಸಾಗಿಸಲಾಗಿದ್ದ 297 ಪುರಾತನ ವಸ್ತುಗಳನ್ನು ಭಾರತಕ್ಕೆ ಅಮೆರಿಕ ಹಿಂದಿರುಗಿಸಿದೆ.
ಸಾಂಸ್ಕೃತಿಕ ಆಸ್ತಿಯ ಅಕ್ರಮ ಕಳ್ಳಸಾಗಣೆಯು ಇತಿಹಾಸದುದ್ದಕ್ಕೂ ಅನೇಕ ಸಂಸ್ಕೃತಿಗಳು ಮತ್ತು ದೇಶಗಳ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸಮಸ್ಯೆಯಾಗಿದೆ. ಭಾರತವು ವಿಶೇಷವಾಗಿ ಪ್ರಭಾವಿತವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಮತ್ತು ಸಾಂಸ್ಕೃತಿಕ ಆಸ್ತಿಗಳ ಅಕ್ರಮ ಕಳ್ಳಸಾಗಣೆ ವಿರುದ್ಧ ಹೋರಾಟವನ್ನು ದೃಢಗೊಳಿಸುವ ನಿಟ್ಟಿನಲ್ಲಿ ಭಾರತಕ್ಕೆ 297 ಬೆಲೆಬಾಳುವ ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಲಿರುವ ಅಮೆರಿಕ ಸರ್ಕಾರ ಮತ್ತು ಅಧ್ಯಕ್ಷ ಜೋ- ಬೈಡನ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.