ಬೆಂಗಳೂರು: ಭಾರೀ ಮಳೆಯ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು (ಸೋಮವಾರ) ರಜೆ (Holiday) ಘೋಷಿಸಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸೋಮವಾರ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಮೌಖಿಕವಾಗಿ ಆದೇಶಿಸಿದ್ದಾರೆ.
ಭಾರೀ ಮಳೆ; ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ ಘೋಷಣೆ
Leave a comment
Leave a comment