ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಜೀವ ದಹನ

public wpadmin

ಮುಂಬೈ: ಅಗ್ನಿ ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಘಟನೆ ಮುಂಬೈನ ಚೆಂಬೂರಿನಲ್ಲಿ ಸಂಭವಿಸಿದೆ.

ಚೆಂಬೂರಿನ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.
ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Share This Article
Leave a comment