ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ (52) ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ನದಿಯಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅಗ್ನಿಶಾಮಕದಳ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಬೆಳಗ್ಗೆ ಮೂರು ಗಂಟೆಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟ್ಟಿದ್ದರು. ಬೆಳಗ್ಗೆ 6 ಗಂಟೆಗೆ ಕುಳೂರು ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದೆ. ಬಿಎಂಡಬ್ಲ್ಯೂ ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿದೆ. ಆಲಿ ಅವರು ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಮಿಷನರ್ ಮುಂದೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.