ನವದೆಹಲಿ: ಭಾರತದ ವಿರುದ್ಧವೇ ಚುನಾವಣೆಯಲ್ಲಿ ಅಭಿಯಾನ ನಡೆಸಿ ಭಾರತದ ಸೈನಿಕರನ್ನು ಹೊರ ಹಾಕಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮೂರು ದಿನಗಳ ಪ್ರವಾಸಕ್ಕಾಗಿ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಈ ಭೇಟಿಯ ವೇಳೆ ಬೆಂಗಳೂರಿಗೂ ಆಗಮಿಸಿ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.
ಮಾಲ್ಡೀವ್ಸ್ನಲ್ಲಿ ಅಧಿಕಾರಕ್ಕೆ ಏರಿದ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಅಧಿಕೃತ ಪ್ರವಾಸ ಇದಾಗಲಿದೆ. ಈ ಜೂನ್ನಲ್ಲಿ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಮುಯಿಝು ಅವರು ಅತಿಥಿಯಾಗಿ ಆಗಮಿಸಿದ್ದರು. ಅ.7 ರಿಂದ 10 ರವರೆಗೆ ಮುಯಿಝು ಭಾರತದಲ್ಲಿ ಇರಲಿದ್ದು ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಪ್ರವಾಸದ ವೇಳೆ ಬೆಂಗಳೂರು, ದೆಹಲಿ ಮತ್ತು ಮುಂಬೈಗೆ ಭೇಟಿ ನೀಡಲಿದ್ದಾರೆ.
ಭಾರತದ ಸಿಲಿಕಾನ್ ಸಿಟಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಂಗಳೂರಿನಲ್ಲಿ ವಿಶ್ವದ ಹಲವು ಕಂಪನಿಗಳ ಕಚೇರಿಗಳಿಗೆ. ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಹೂಡಿಕೆ ಆಗುತ್ತಿದೆ. ಮಾಲ್ಡೀವ್ಸ್ನಲ್ಲಿ ಹೂಡಿಕೆದಾರರನ್ನು ಸೆಳೆಯಲು ಉದ್ಯಮ ಸಭೆಯಲ್ಲಿ ಭಾಗಿಯಾಗಲು ಮುಯಿಝು ಬೆಂಗಳೂರಿಗೆ ಬರುತ್ತಿದ್ದಾರೆ. ಬೆಂಗಳೂರಿನ ಕಾರ್ಯಕ್ರಮದ ವೇಳಾಪಟ್ಟಿ ಇನ್ನೂ ನಿಗದಿಯಾಗಿಲ್ಲ.