ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ನಮ್ಮ ಮೆಟ್ರೋ ಆದಾಯದ ಏರಿಕೆಯಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿತ್ತು. ಇದರ ಪರಿಣಾಮ ಹೆಚ್ಚಿನ ಜನರು ಸಂಚಾರಕ್ಕಾಗಿ ಮೆಟ್ರೋ ರೈಲನ್ನು ಬಳಸಿದ್ದರು. ಇದರ ಪರಿಣಾಮ ನಮ್ಮ ಮೆಟ್ರೋ ರೈಲಿನ ಆದಾಯದಲ್ಲಿ ಭಾರೀ ಏರಿಕೆಯಾಗಿದೆ.
ಕಳೆದ ವರ್ಷಕ್ಕಿಂತ ಈ ವರ್ಷ ಮೆಟ್ರೋ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. 2023ರಲ್ಲಿ ಅಕ್ಟೋಬರ್ ತಿಂಗಳ 24 ದಿನಗಳಲ್ಲಿ 39.12 ಕೋಟಿ ರೂ. ಸಂಗ್ರಹವಾಗಿತ್ತು. ಈ ವರ್ಷ 48.35 ಕೋಟಿ ರೂ. ಆದಾಯ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 9.22 ಕೋಟಿ ರೂ. ಹೆಚ್ಚಿನ ಆದಾಯ ಬಂದಿದೆ.
2023ರ ಅ.1 ರಿಂದ ಅ.24 ರವರೆಗೆ ಒಟ್ಟು 1.52 ಕೋಟಿ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದರು. 2024ರ ಅಕ್ಟೋಬರ್ ಆರಂಭದಿಂದ ಇಲ್ಲಿಯವರೆಗೂ ಒಟ್ಟು 1.85 ಕೋಟಿ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 32.90 ಲಕ್ಷ ಜನರು ಹೆಚ್ಚಾಗಿ ಪ್ರಯಾಣಿಸಿದ್ದಾರೆ. ಅದರಲ್ಲೂ ಅತೀ ಹೆಚ್ಚು ಪ್ರಯಾಣಿಕರು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದವನ್ನು ಬಳಸಿ ಪ್ರಯಾಣಿಸಿದ್ದಾರೆ.