ಮೈಸೂರು ದಸರಾ ಜಂಬೂಸವಾರಿ;– ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ

public wpadmin

ಮೈಸೂರು: ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿತು. ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.

750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಅರಮನೆ ಆವರಣದಲ್ಲಿ ಅಭಿಮನ್ಯು ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ. ಸರ್ವಾಲಂಕಾರ ಭೂಷಿತಳಾಗಿ ನಾಡ ಅಧಿದೇವತೆ ಚಾಮುಂಡೇಶ್ವರಿ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದನ್ನು ಕಂಡು ಜನರು ಹರ್ಷೋದ್ಘಾರ ವ್ಯಕ್ತಪಡಿಸಿದರು. ‘ಜೈ ಚಾಮುಂಡೇಶ್ವರಿ..’ ಎಂದು ಕೂಗಿ ಭಕ್ತಿ-ಭಾವ ಮೆರೆದರು. 

ಸತತ 5ನೇ ಬಾರಿಗೆ ಚಿನ್ನದಂಬಾರಿ ಹೊತ್ತು ಕ್ಯಾಪ್ಟನ್‌ ಅಭಿಮನ್ಯು ಪುಷ್ಪಾರ್ಚನೆ ಸ್ಥಳಕ್ಕೆ ಸುಮಾರು 400 ಮೀ. ಸಾಗಿದ. ಅಭಿಮನ್ಯು ಎಡಬಲದಲ್ಲಿ ಕುಮ್ಕಿ ಆನೆಗಳಾಗಿ ಹಿರಣ್ಯ ಮತ್ತು ಲಕ್ಷ್ಮಿ ಆನೆಗಳು ಹೆಜ್ಜೆ ಹಾಕಿದವು. ಸಂಜೆ 5:02 ಕ್ಕೆ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು. ಅರ್ಧ ಗಂಟೆ ತಡವಾಗಿ ಪುಷ್ಪಾರ್ಚನೆ ನೆರವೇರಿಸಲಾಯಿತು. ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ.ಮಹದೇವಪ್ಪ, ಸಚಿವ ಶಿವರಾಜ್‌ ತಂಗಡಗಿ, ಮೈಸೂರು ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಸಾಥ್‌ ನೀಡಿದರು. ಪುಷ್ಪಾರ್ಚನೆ ಬಳಿಕ ರಾಷ್ಟ್ರಗೀತೆಗೆ ಎಲ್ಲರೂ ಗೌರವ ಸಲ್ಲಿಸಿದರು.

Share This Article
Leave a comment