ರತನ್ ಟಾಟಾ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ – ಏಕನಾಥ್ ಶಿಂಧೆ

public wpadmin

ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

ರತನ್ ಟಾಟಾ ಅವರ ನಿಧನದ ಕುರಿತು ಏಕನಾಥ್ ಶಿಂಧೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಟಾಟಾ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂದು (ಗುರುವಾರ) ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತದೆ. ಗೌರವ ಸೂಚಕವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಇಂದು ನಿಗದಿಯಾಗಿದ್ದ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. 

Share This Article
Leave a comment