ಬೆಂಗಳೂರು: ರಾಜ್ಯದ (Karnataka) ಕೆಲ ಜಿಲ್ಲೆಗಳಲ್ಲಿಂದು ಹಗುರ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.