ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 26-21
ಮೈಸೂರು: 28-20
ಮಂಡ್ಯ: 29-21
ಮಡಿಕೇರಿ: 23-17
ರಾಮನಗರ: 28-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-20
ಕೋಲಾರ: 27-21
ತುಮಕೂರು: 27-20
ಉಡುಪಿ: 29-24
ಕಾರವಾರ: 28-25
ಚಿಕ್ಕಮಗಳೂರು: 25-18
ದಾವಣಗೆರೆ: 28-22
ಹುಬ್ಬಳ್ಳಿ: 27-22
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 28-23
ಗದಗ: 27-22
ಕೊಪ್ಪಳ: 28-22
ರಾಯಚೂರು: 29-23
ಯಾದಗಿರಿ: 31-24
ವಿಜಯಪುರ: 29-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 28-23