ರಾಜ್ಯಾದ್ಯಂತ ವಿವಿಧೆಡೆ RTO ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

public wpadmin

ಬೀದರ್‌: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್‌ಟಿಒ ಚೆಕ್‌ಪೋಸ್ಟ್‌ಗಳ ಮೇಲೆ ದಾಳಿ ನಡೆಸಿದ್ದಾರೆ.
ಚೆಕ್‌ ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದ್ದಾರೆ. ಬೀದರ್‌, ಬಳ್ಳಾರಿ, ಕೋಲಾರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.
ವಾಹನ ಸವಾರದಿಂದ ಹಣ ವಸೂಲಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಹಿನ್ನೆಲೆ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಬಿ.ಕೆ ಉಮೇಶ್ ನೇತ್ರತ್ವದಲ್ಲಿ ನಾಲ್ಕು ಅಧಿಕಾರಿಗಳ ತಂಡದಿಂದ ದಾಳಿ ಮಾಡಿ ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ.

Share This Article
Leave a comment