ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಬಿಜೆಪಿ

public wpadmin

ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ಬಿಜೆಪಿ ದೂರು ಸಲ್ಲಿಸಿದೆ. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್ ಸೇರಿ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಹೌದು, ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್‌ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು. ನಂತರದ ಮಾಧ್ಯಮ ಸಂವಾದದಲ್ಲಿ, ‘ನಾನು ಮೀಸಲಾತಿಗೆ ವಿರುದ್ಧವಾಗಿ ಇದ್ದೇನೆ ಎಂಬಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದರು. ಈ ಸಂಬಂಧ ರಾಜ್ಯದೆಲ್ಲೆಡೆ, ಬಿಜೆಪಿ ವಲಯದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.

ಅಷ್ಟೇಅಲ್ಲ, ಇತ್ತೀಚೆಗೆ ಈ ಸಂಬಂಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿತ್ತು. ಇದೀಗ ದೂರು ದಾಖಲಿಸಿದೆ.

Share This Article
Leave a comment