ಲಡ್ಡು ವಿವಾದ: ವಿಶೇಷ ತನಿಖೆಗೆ ಸುಪ್ರೀಂ ಆದೇಶ

public wpadmin

ಆಂಧ್ರ ಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಶೇಷ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠವು, ‘ಈ ವಿಚಾರಕ್ಕೆ ನ್ಯಾಯಾಲಯವನ್ನು ರಣರಂಗವಾಗಿ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ. ದೇವರಲ್ಲಿ ನಂಬಿಕೆ ಹೊಂದಿರುವ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ಎಸ್‌ಐಟಿ ರಚನೆ ಮಾಡಲಾಗಿದೆ. ಎಸ್‌ಐಟಿಯಲ್ಲಿ ಆಂಧ್ರಪ್ರದೇಶ ಪೊಲೀಸ್‌ನ ಇಬ್ಬರು ಅಧಿಕಾರಿಗಳು, ಒಬ್ಬ ಎಫ್‌ಎಸ್‌ಎಸ್‌ಎಐನ ಹಿರಿಯ ಅಧಿಕಾರಿ ಇರಲಿದ್ದಾರೆ. ಎಸ್‌ಐಟಿ ತನಿಖೆಯನ್ನು ಸಿಬಿಐ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಪೀಠ ಹೇಳಿದೆ.
ಕೇಂದ್ರ ತನಿಖಾ ಸಂಸ್ಥೆಗಳು ಲಡ್ಡು ಪ್ರಸಾದದ ಆರೋಪ ಬಗ್ಗೆ ಸತ್ಯಾಂಶವನ್ನು ಶೀಘ್ರವೇ ಬಿಚ್ಚಿಸಲಿವೆ.

Share This Article
Leave a comment