ಚಂಡೀಗಢ: ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದ ಅಜ್ಮೀರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 8 ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ ಆರೋಪಿ, ಸಿಎಂ ನಯಾಬ್ ಸಿಂಗ್ ಸೈನಿ (Nayab Singh Saini) ಅವರಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ.
ಈ ವಿಚಾರ ಪೊಲೀಸರ ಗಮನಕ್ಕೆ ಬಂದ ತಕ್ಷಣ ಎಫ್‌ಐಆರ್ ದಾಖಲಿಸಿ ಅಜ್ಮೀರ್‌ನನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಆರೋಪಿ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನಾ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.