ಇಂದಿನ ರಾಶಿ ಭವಿಷ್ಯ
25-09-2024, ಬುಧವಾರ
—
ಈ ದಿನ- ನಿತ್ಯ ಪಂಚಾಂಗ
ಸೂರ್ಯೋದಯ: 06:09, ಸೂರ್ಯಾಸ್ತ : 06:06
ಶಾಲಿವಾಹನ ಶಕೆ :1946,
ಸಂವತ್ :2080,
ಸಂವತ್ಸರ :ಕ್ರೋಧಿ ನಾಮ,
ಋತು: ವರ್ಷ ಋತು
ಅಯಣ: ದಕ್ಷಿಣ
ಮಾಸ: ಭಾದ್ರಪದ
ಪಕ್ಷ :ಶುಕ್ಲ
ತಿಥಿ: ಅಷ್ಟಮಿ
ನಕ್ಷತ್ರ: ಆರಿದ್ರ,
ರಾಹು ಕಾಲ: 12:00 ನಿಂದ 01:30 ತನಕ
ಯಮಗಂಡ: 07:30 ನಿಂದ 09:00 ತನಕ
ಗುಳಿಕ ಕಾಲ: 10:30 ನಿಂದ 12:00 ತನಕ
ಅಮೃತಕಾಲ: ಮ.12:11 ನಿಂದ ಮ.1:49 ತನಕ
ಅಭಿಜಿತ್ ಮುಹುರ್ತ: ಇಲ್ಲ
—
ಮೇಷ
ಮನೆಯ ಹೊರಗೆ ಗೊಂದಲಮಯ ಪರಿಸ್ಥಿತಿ ಇರುತ್ತದೆ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ. ಹಣದ ವಿಷಯದಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರದಲ್ಲಿ ಇತರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಬಣ್ಣ: ಹಳದಿ
ವೃಷಭ
ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ. ದೀರ್ಘಾವಧಿಯ ಸಾಲ ಸ್ವಲ್ಪ ಮಟ್ಟಿಗೆ ಪರಿಹಾರವಾಗುತ್ತದೆ. ಹೊಸ ಉದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಶುಭ ಕಾರ್ಯಗಲ್ಲ ಪ್ರಸ್ಥಾಪವಿರುತ್ತದೆ. ವ್ಯಾಪಾರಗಳು ವಿಸ್ತರಿಸುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಸಹಾಯ ದೊರೆಯುತ್ತದೆ.
ಅದೃಷ್ಟದ ದಿಕ್ಕು: ನೈಋತ್ಯ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಬಣ್ಣ: ಬೂದು
ಮಿಥುನ
ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೆಲಸಗಳು ಮುಂದೆ ಸಾಗದೆ ಕಿರಿಕಿರಿಯು ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ದೂರ ಪ್ರಯಾಣದಿಂದ ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ವಾತವರಣ ಅವ್ಯವಸ್ಥವಾಗಿರುತ್ತದೆ
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಬಣ್ಣ: ನೇರಳೆ
ಕರ್ಕಾಟಕ
ಸ್ಥಿರ ಆಸ್ತಿಗಳ ಮಾರಾಟ ಲಾಭದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ಪ್ರಗತಿ ಸಾಧಿಸುತ್ತೀರಿ. ಉದ್ಯೋಗದಲ್ಲಿ ಹುದ್ದೆಗಳು ಹೆಚ್ಚಾಗುತ್ತವೆ. ಕೈಗೊಂಡ ಕೆಲಸದಲ್ಲಿ, ಪ್ರಯತ್ನಕ್ಕೆ ತಕ್ಕ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಬಾಲ್ಯದ ಸ್ನೇಹಿತರಿಂದ ಆಸಕ್ತಿದಾಯಕ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯಕ್ಷಮತೆಯಿನ ಪ್ರಶಂಸೆ ಪಡೆಯುತ್ತೀರಿ.
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಬಣ್ಣ: ಕೆಂಪು
ಸಿಂಹ
ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕುಟುಂಬದ ಸದಸ್ಯರ ನೆರವಿನಿಂದ ಪ್ರಮುಖ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಅನುಕೂಲಕರವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಬಣ್ಣ: ನೀಲಿ
ಕನ್ಯಾ
ಬಂಧು-ಮಿತ್ರರೊಂದಿಗೆ ಸಣ್ಣ-ಪುಟ್ಟ ವಿವಾದ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಉದ್ಯೋಗದಲ್ಲಿ ವಿವಾದಗಳಿಂದ ದೂರವಿವುದು ಉತ್ತಮ.
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಬಣ್ಣ: ಕಂದು
ತುಲಾ
ಪ್ರಮುಖ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶೆಗೊಳಿಸುತ್ತವೆ. ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ಆಧ್ಯಾತ್ಮಿಕ ವಿಷಯಗಳ ಮೇಲೆ ಕೇಂದ್ರೀಕರಿಸುತ್ತೀರಿ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಬಣ್ಣ: ಹಸಿರು
ವೃಶ್ಚಿಕ
ಸಮಾಜದಲ್ಲಿ ಪ್ರಮುಖರೊಂದಿಗಿನ ಪರಿಚಯ ವಿಸ್ತಾರಗೊಳ್ಳುತ್ತದೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಲಾಭದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಆರ್ಥಿಕ ಪ್ರಗತಿ ಸಾಧಿಸಲಾಗುತ್ತದೆ. ವ್ಯಾಪಾರ ವ್ಯವಹಾರಗಳು ಅನುಕೂಲಕರವಾಗಿರುತ್ತವೆ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ.
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಬಣ್ಣ: ಹಳದಿ
ಧನುಸ್ಸು
ಕೈಗೆತ್ತಿಕೊಂಡ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ಸಹೋದರರಿಂದ ಶುಭ ಸುದ್ದಿ ಸಿಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ.
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಬಣ್ಣ: ಕಿತ್ತಳೆ
ಮಕರ
ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ.
ಅದೃಷ್ಟದ ದಿಕ್ಕು: ನೈಋತ್ಯ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಬಣ್ಣ: ನೇರಳೆ
ಕುಂಭ
ಹಠಾತ್ ಪ್ರಯಾಣ ಮಾಡಬೇಕಾಗುತ್ತದೆ. ಸೋದರ ಸಂಬಂಧಿಗಳೊಂದಿಗೆ ಆಸ್ತಿ ವಿವಾದವಿರುತ್ತದೆ. ಕೆಲವು ವ್ಯವಹಾರಗಳಲ್ಲಿ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡಚಣೆಗಳು ಉಂಟಾಗುತ್ತವ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವ್ಯಾಪಾರ-ವ್ಯವಹಾರಗಳು ಅಲ್ಪ ಲಾಭವನ್ನು ಪಡೆಯುತ್ತವೆ. ಉದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ.
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಬಣ್ಣ: ನೀಲಿ
ಮೀನ
ಗೌರವ ಪ್ರತಿಷ್ಟೆಗಳು ಹೆಚ್ಚಾಗುತ್ತದೆ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ವ್ಯವಹಾರಗಳು ಆಶಾದಾಯಕವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗವಿದೆ.
ಅದೃಷ್ಟದ ದಿಕ್ಕು: ವಾಯವ್ಯ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಬಣ್ಣ: ಹಸಿರು