ಶುಭೋದಯ… ದಿನ ಭವಿಷ್ಯ 14-09-2024, ಶನಿವಾರ, ಮೇಷ- ಪಿತೂರಿ ಬಗ್ಗೆ ಎಚ್ಚರದಿಂದಿರಿ, ತುಲಾ- ಆತುರದ ಮಾತು‌ ಬೇಡ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

public wpadmin

ಶುಭೋದಯ

ದಿನ ಭವಿಷ್ಯ

14-09-2024, ಶನಿವಾರ

ಶ್ರೀ ಶಾಲಿವಾಹನ ಶಕೆ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 20:40 ವಾರ: ಶನಿವಾರ
ನಕ್ಷತ್ರ: ಉತ್ತರಾಷಾಢ 20:31 ಯೋಗ: ಶೋಭನ 18:16
ಕರಣ: ವಣಿಜ 09:40 ಅಮೃತಕಾಲ: ಮಧ್ಯಾಹ್ನ 02:25ರಿಂದ 03:57
ದಿನ ವಿಶೇಷ: ಮೇಲುಕೋಟೆ ಪವಿತ್ರೋತ್ಸವ ಆರಂಭ

ಸೂರ್ಯೋದಯ: 06:09 ಸೂರ್ಯಾಸ್ತ: 06:21

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

*

ಮೇಷ

ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

ವೃಷಭ

ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ ಆಗಲಿದೆ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

ಮಿಥುನ

ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಇರಲಿದೆ, ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

ಕಟಕ

ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಸಿಂಹ

ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು ಇರಲಿದೆ. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

ಕನ್ಯಾ

ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ತುಲಾ

ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ವೃಶ್ಚಿಕ

ಕುಟುಂಬ ಸದಸ್ಯರ ಆರೋಗ್ಯದ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಧನುಸ್ಸು

ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

ಮಕರ

ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

ಕುಂಭ

ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಉತ್ತಮ ಆರೋಗ್ಯವಾಗಿರಲಿದೆ. ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

ಮೀನ

ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1
[2:39 PM, 9/14/2024] Mardan M: ಶುಭೋದಯ… ದಿನ ಭವಿಷ್ಯ 14-09-2024, ಶನಿವಾರ, ಮೇಷ- ಪಿತೂರಿ ಬಗ್ಗೆ ಎಚ್ಚರದಿಂದಿರಿ, ತುಲಾ- ಆತುರದ ಮಾತು‌ ಬೇಡ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Share This Article
Leave a comment