ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೊಲೆ ಬೆದರಿಕೆ ಹಾಕಿದ್ದು, ದ್ವೇಷವನ್ನು ಕೊನೆಗಾಣಿಸಲು 5 ಕೋಟಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.
ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ, ಹಣವನ್ನು ನೀಡದಿದ್ದರೆ ನಟನ ಭವಿಷ್ಯವು ಇತ್ತೀಚೆಗೆ ಬಿಷ್ಣೋಯ್ ಗ್ಯಾಂಗ್ ಸದಸ್ಯರಿಂದ ಹತ್ಯೆಗೀಡಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಗಿಂತ ಕೆಟ್ಟದಾಗಿರುತ್ತದೆ ಎಂದು ಎಚ್ಚರಿಸಿದೆ.
ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಸಲ್ಮಾನ್ ಖಾನ್ ಬದುಕಿ ಉಳಿಯಬೇಕಾದರೆ ಲಾರೆನ್ಸ್ ಬಿಷ್ಣೋಯ್ ಜೊತೆಗಿನ ದ್ವೇಷವನ್ನು ಕೊನೆಗಾಣಿಸಲು ಬಯಸಿದರೆ 5 ಕೋಟಿ ನೀಡಬೇಕು. ಹಣ ನೀಡದಿದ್ದರೆ ಬಾಬಾ ಸಿದ್ದಿಕಿಗಿಂತ ಅವರ ಸ್ಥಿತಿ ಕೆಟ್ಟದಾಗುತ್ತದೆ ಎಂದು ಗ್ಯಾಂಗ್ ಸಂದೇಶ ರವಾನಿಸಿದೆ.