ಸಿಎಂ ಸಿದ್ದರಾಮಯ್ಯಗೆ ಮತ್ತೆ ಹಿನ್ನಡೆ, ಮುಡಾ ಹಗರಣ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

public wpadmin

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲೂ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆ ಆದೇಶ ನೀಡಿದೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಇಂದು ಅಥವಾ ನಾಳೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಲೋಕಾಯುಕ್ತ ಎಸ್ಪಿ ಎಫ್ಐಆರ್ ದಾಖಲಿಸಲಿದ್ದು, ಅಗತ್ಯವಾದರೆ ಸಿಎಂ ಸಿದ್ದರಾಮಯ್ಯ ಅವರನ್ನು ಬಂಧಿಸಬಹುದಾಗಿರುತ್ತದೆ.

ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 6 ವಾರಗಳ ಒಳಗೆ ತನಿಖೆ ಆಗಬೇಕು ಎಂದು ಕೋರ್ಟ್ ಆದೇಶ ನೀಡಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ ಎದುರಾಗಿದೆ.
ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸು ತಿರಸ್ಕರಿಸಿದ್ದು ಸರಿಯಾಗಿದೆ.

ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17A ಅಡಿಯಲ್ಲಿ ಆದೇಶ ಸಮರ್ಪಕವಾಗಿದೆ. ಸಿಎಂ ಸಲ್ಲಿರುವ ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

Share This Article
Leave a comment