ಸೇನಾ ನೆಲೆಯ ಮೇಲೆ ಹಿಜ್ಬುಲ್ಲಾ ಡ್ರೋನ್ ಅಟ್ಯಾಕ್‌ – 4 ಇಸ್ರೇಲ್‌ ಸೈನಿಕರು ಬಲಿ

public wpadmin

ಬೈರೂತ್‌: ಒಂದು ವರ್ಷ ಕಳೆದರೂ ಇಸ್ರೇಲ್‌-ಹಮಾಸ್‌-ಹಿಜ್ಬುಲ್ಲಾ ನಡುವಿನ ದಾಳಿಯ ತೀವ್ರತೆ ಹೆಚ್ಚುತ್ತಲೇ ಇದೆ. ಅ.7ಕ್ಕಿಂತ ಭೀಕರವಾಗಿ ದಾಳಿ ನಡೆಸಲು ಹಮಾಸ್‌ ಪ್ಲಾನ್‌ ಮಾಡಿದೆ ಎಂಬ ವದಂತಿ ಹಬ್ಬಿದ ಬೆನ್ನಲ್ಲೇ ಇಸ್ರೇಲ್‌ ಮೇಲೆ ಭೀಕರ ದಾಳಿ ನಡೆದಿದೆ. ಲೆಬನಾನ್‌ನ ಗಡಿಯುದ್ಧಕ್ಕೂ ಬಾಂಬ್‌ ದಾಳಿಗಳನ್ನು ವಿಸ್ತರಿಸಿದೆ. ಉತ್ತರದ ನೆಲೆಗಳಲ್ಲಿ ಹಿಜ್ಬುಲ್ಲಾ ಡ್ರೋನ್‌ಗಳು ತನ್ನ ನಾಲ್ವರು ಸೈನಿಕರನ್ನು

ಹೈಫಾ ಬಳಿಯ ಬಿನ್ಯಾಮಿನಾದಲ್ಲಿನ ಮಿಲಿಟರಿ ತರಬೇತಿ ಶಿಬಿರದ ಮೇಲಿನ ದಾಳಿಯು ಸೆಪ್ಟೆಂಬರ್ 23 ನಂತರ ಇಸ್ರೇಲ್ ನೆಲೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಾಗಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್, ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಮೇಲೆ ದಾಳಿ ನಡೆಸಿದ್ದು, ತುರ್ತು ಸೇವೆಗಳಲ್ಲಿ ವ್ಯತ್ಯಯವಾಗಿದ, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

ಈ ನಡುವೆ ಸ್ಥಳಾಂತರಗೊಂಡ ಜನರಿಗೆ ಆಶ್ರಯ ತಾಣವಾಗಿ ಬಳಸಲಾಗುತ್ತಿದ್ದ ಶಾಲೆಯ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಒಂದೇ ಕುಟುಂಬದ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಜಾದ ಅಧಿಕಾರಿಗಳು ತಿಳಿಸಿದ್ದಾರೆ. 

ಇತ್ತೀಚೆಗಷ್ಟೇ ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿ, ಸುಮಾರು 117 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್‌ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತ ಅಧಿಕಾರಿಯೊಬ್ಬರು ಬದುಕುಳಿದಿದ್ದರು. ಈ ಬೆನ್ನಲ್ಲೇ ಇಸ್ರೇಲ್‌ ವಿರುದ್ಧ ಅಕ್ಟೋಬರ್‌ 7ಕ್ಕಿಂತಲೂ ಭೀಕರ ದಾಳಿ ನಡೆಸುವುದಾಗಿ ಒಂದು ದಿನದ ಹಿಂದೆಯಷ್ಟೇ ಎಚ್ಚರಿಕೆ ನೀಡಿದರು. ಅದರಂತೆ ಲೆಬನಾನ್‌ನ ಉತ್ತರ ಗಡಿ ಭಾಗಗಳಲ್ಲಿ ಇಸ್ರೇಲ್‌ ಸೇನೆ ವಿರುದ್ಧ ದಾಳಿ ನಡೆಸಿದ್ದು ನಾಲ್ವರು ಸೈನಿಕರನ್ನು ಹತ್ಯೆಗೈದಿದೆ.

Share This Article
Leave a comment