ಸ್ಟೈಲೀಶ್ ಆಗಿ ಕಾಣಿಸಿಕೊಂಡ ರಣಬೀರ್ ಕಪೂರ್- ‘ಧೂಮ್ 4’ ಬಗ್ಗೆ ಚರ್ಚೆ ಶುರು

public wpadmin

‘ಅನಿಮಲ್’ ಸಿನಿಮಾದ ಸಕ್ಸಸ್ ನಂತರ ರಣಬೀರ್ ಕಪೂರ್ ಬೇಡಿಕೆ ಹೆಚ್ಚಾಗಿದೆ. ‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ನಟಿಸುವುದರ ಜೊತೆಗೆ ಹಲವು ಪ್ರಾಜೆಕ್ಟ್‌ಗಳಲ್ಲಿ ನಟಿಸಲು ಅವಕಾಶಗಳು ಅರಸಿ ಬರುತ್ತಿದೆ. ಈ ನಡುವೆ ಅವರ ಹೊಸ ಲುಕ್‌ವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಕ್ಕಾಪಟ್ಟೆ ಸ್ಟೈಲೀಶ್ ಆಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ.

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕಿಮ್ ಅವರು ರಣಬೀರ್ ಹೊಸ ಲುಕ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಬೆನ್ನಲ್ಲೇ, ನಟ ‘ಧೂಮ್ 4’ ಚಿತ್ರಕ್ಕಾಗಿ ಹೇರ್ ಸ್ಟೈಲ್ ಬದಲಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇನ್ನೂ ‘ಧೂಮ್’ ಚಿತ್ರದ ಈ ಹಿಂದಿನ ಮೂರು ಸರಣಿಗಳು ಸೂಪರ್ ಹಿಟ್ ಆಗಿದೆ. ಹಾಗಾಗಿ ‘ಧೂಮ್ 4’ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ. ಇನ್ನೂ ಈ ಚಿತ್ರದಲ್ಲಿ ರಣಬೀರ್ ನೆಗೆಟಿವ್ ಶೇಡ್‌ನಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

ಅಂದಹಾಗೆ, ರಾಮಾಯಣ, ಧೂಮ್ 4, ಅನಿಮಲ್ ಪಾರ್ಕ್, ಕರಣ್ ಜೋಹರ್ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳು ರಣಬೀರ್ ಕೈಯಲ್ಲಿವೆ.

Share This Article
Leave a comment