ಕನ್ನಡದ ‘ಮಾಸ್ಟರ್‌ಪೀಸ್’ ನಟಿ ಶಾನ್ವಿ ಶ್ರೀವಾಸ್ತವ (Shanvi Srivastava) ಬಹುಭಾಷಾ ನಟಿಯಾಗಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಾಲ್ಡೀವ್ಸ್ ತೆಗೆದ ಹಾಟ್ ಫೋಟೋವೊಂದನ್ನು ನಟಿ ಹಂಚಿಕೊಂಡಿದ್ದಾರೆ.
ಸಿನಿಮಾಗೆ ಬ್ರೇಕ್ ಕೊಟ್ಟು ಮಾಲ್ಡೀವ್ಸ್‌ಗೆ (Maldives) ಶಾನ್ವಿ ತೆರಳಿದ್ದಾರೆ. ಕಡಲ ತೀರದಲ್ಲಿ ಹಾಟ್ ಆಗಿ ಪೋಸ್ಟ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ನಿಂತಿರುವ ಸುಂದರ ಫೋಟೋವನ್ನು ನಟಿ ಹಂಚಿಕೊಂಡಿದ್ದಾರೆ. ನಟಿಯ ಬೋಲ್ಡ್ ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಇನ್ನೂ ‘ಚಂದ್ರಲೇಖ’ ಸಿನಿಮಾ ಮೂಲಕ ಶಾನ್ವಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಚಿರಂಜೀವಿ ಸರ್ಜಾಗೆ ನಾಯಕಿಯಾಗಿ ನಟಿಸಿದರು. ಈ ಚಿತ್ರವನ್ನು ಓಂ ಪ್ರಕಾಶ್ ರಾವ್ ನಿರ್ದೇಶನ ಮಾಡಿದರು. ಆ ನಂತರ ಯಶ್ ಜೊತೆ ‘ಮಾಸ್ಟರ್‌ಪೀಸ್’ ಸಿನಿಮಾದಲ್ಲಿ ಶಾನ್ವಿ ನಟಿಸಿದರು. ಭಲೇ ಜೋಡಿ, ಸುಂದರಾಂಗ ಜಾಣ, ಮಫ್ತಿ, ಗೀತಾ, ತಾರಕ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ಜೊತೆ ತೆಲುಗು, ತಮಿಳು, ಮಲಯಾಳಂನಲ್ಲೂ ಶಾನ್ವಿ ಗುರುತಿಸಿಕೊಂಡಿದ್ದಾರೆ.
ಪ್ರಸ್ತುತ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಸಿನಿಮಾದಲ್ಲಿ ನಿರೂಪ್ ಭಂಡಾರಿ, ಪೃಥ್ವಿ ಅಂಬರ್ ಜೊತೆ ಶಾನ್ವಿ ನಟಿಸಿದ್ದಾರೆ. ತ್ರಿಶೂಲಂ ಎಂಬ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ.