ಹುಬ್ಬಳ್ಳಿ ಬೈಪಾಸ್ ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು – ಛಿದ್ರ ಛಿದ್ರವಾದ ದೇಹಗಳು

public wpadmin

ಹುಬ್ಬಳ್ಳಿ: ಬೈಕ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದಲ್ಲಿರುವ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬೈಪಾಸ್ ಬಳಿ ನಡೆದಿದೆ.

ಮೃತ ವ್ಯಕ್ತಿಗಳ ಗುರುತು ಪತ್ತೆಯಾಗದ ರೀತಿಯಲ್ಲಿ ದೇಹಗಳು ಛಿದ್ರಗೊಂಡಿದ್ದು, ಸದ್ಯ ಇಬ್ಬರ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅವಘಡ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಸಾವಿನ ಹೆದ್ದಾರಿಗೆ ಮತ್ತೆರಡು ಬಲಿಯಾಗಿದ್ದು, ಈ ಹೆದ್ದಾರಿಯಲ್ಲಿ ಪ್ರತಿದಿನವೂ ಸಂಚರಿಸುವಾಗ ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸಬೇಕು. ಹೆದ್ದಾರಿ-1400 ಹಗಲೀಕರಣವಾಗಬೇಕು. ಕಾಮಗಾರಿಗೆ ಚಾಲನೆ ಸಿಕ್ಕಿ ಮೂರು ವರ್ಷ ಕಳೆದಿದ್ದರೂ, ಇದರಿಂದ ಇನ್ನೂ ಜನರಿಗೆ ಉಪಯೋಗವಾಗಿಲ್ಲ. ಇದೇ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ದಿನೇ ದಿನೇ ಬಲಿ ಪಡೆದುಕೊಳ್ಳುತ್ತಿದೆ ಎಂದು ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share This Article
Leave a comment